×
Ad

ಮಣಿಪಾಲ : ರಾಜ್ಯೋತ್ಸವ ಪುರಸ್ಕೃತರಿಗೆ ಅಭಿನಂದನ ಸಮಾರಂಭ

Update: 2023-11-12 21:05 IST

ಮಣಿಪಾಲ : ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭವನ್ನು ರವಿವಾರ ಮಣಿಪಾಲದ ಮಸೀದಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಅಬ್ದುಲ್ಲಾ ಪರ್ಕಳ ಹಾಗೂ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತೆ ಆಯಿಶಾ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞ ಮಾತನಾಡಿದರು.

ಇದ್ರಿಸ್ ಹೂಡೆ ಪ್ರಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಸರ್ಫರಾಜ್ ಮನ್ನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News