×
Ad

ಮಣಿಪಾಲ: ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪ ಅನಾವರಣ

Update: 2023-09-29 20:00 IST

ಮಣಿಪಾಲ: ವಿಶ್ವ ಹೃದಯ ದಿನದ ಅಂಗವಾಗಿ ಇಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಲಾವಿದರು ರಚಿಸಿದ ಹೃದಯ ಜಾಗೃತಿ ಕಲಾ ಶಿಲ್ಪವನ್ನು ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಜಂಟಿಯಾಗಿ ಅನಾವರಣ ಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಅವಿನಾಶ ಶೆಟ್ಟಿ,ಹೃದಯ ಆರೋಗ್ಯ ಕಾಪಾಡುವಲ್ಲಿ ಸಮತೋಲಿತ ಆಹಾರ ಮತ್ತು ನಿತ್ಯ ವ್ಯಾಯಾಮದ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕೆಎಂಸಿಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ಪದ್ಮಕುಮಾರ್, ಹೃದ್ರೋಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಗಣೇಶ್ ಕಾಮತ್, ಡಾ.ಗುರುಪ್ರಸಾದ್ ರೈ, ಡಾ.ಕೀರ್ತಿನಾಥ ಬಲ್ಲಾಳ, ಸಚಿನ್ ಕಾರಂತ್ ಮತ್ತು ಮೋಹನ್ ಶೆಟ್ಟಿ ಉಪಸ್ಥಿತರಿದ್ದರು.

ಖ್ಯಾತ ಕಲಾವಿದರಾದ ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಪರಿಸರ ಸ್ನೇಹಿ ವಸ್ತುಗಳಿಂದ ಶಿಲ್ಪವನ್ನು ತಯಾರಿಸಿ ದ್ದರು. ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News