ಮಣಿಪಾಲ | ಮನೆ ಬೀಗ ಮುರಿದು ಚಿನ್ನಾಭರಣ ಕಳವು
Update: 2025-05-29 22:40 IST
ಮಣಿಪಾಲ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬೀಗ ಮುರಿದು 10 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳರು ದೋಚಿಕೊಂಡು ಹೋದ ಘಟನೆ ಮಣಿಪಾಲದ ಶಿವಳ್ಳಿ ಗ್ರಾಮದಿಂದ ವರದಿಯಾಗಿದೆ.
ಶಿವಳ್ಳಿ ಗ್ರಾಮದ ಕಾಯಿನ್ ಸರ್ಕಲ್ ಇರುವ ಕೆಎಂಸಿ ಆಸ್ಪತ್ರೆಯ ವಸತಿ ಗೃಹ ನಂ. ಬಿ 235ರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ವಾಸ್ತವ್ಯದಲ್ಲಿದ್ದ ಸೆಲ್ವಂ ಎಂಬವರು ಮನೆಗೆ ಬೀಗ ಹಾಕಿ ಕೆಲಸದ ನಿಮಿತ್ತ ಚೆನ್ನೈಗೆ ಹೋಗಿದ್ದು, ಮೇ 26ರಂದು ರಾತ್ರಿ ಸಮಯ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿ ಸುಮಾರು 10 ಲಕ್ಷ ರೂ. ಮೌಲ್ಯದ ಬೆಳ್ಳಿ ಹಾಗೂ15,000ರೂ. ನಗದನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಲಾಗಿದೆ.
ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.