ಮಣಿಪಾಲ: ಪೊಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆ
Update: 2026-07-01 21:04 IST
ಮಣಿಪಾಲ, ಜು.1: ಪೊಕ್ಸೋ ಪ್ರಕರಣದ ಆರೋಪಿಯೊಬ್ಬ ಮಣಿಪಾಲ ಕೆಎಂಸಿ ಕ್ಯಾಂಪಸ್‌ನ ಕಾರು ಪಾರ್ಕಿಂಗ್ ಶೆಡ್‌ನಲ್ಲಿ ಜೂ.30ರಂದು ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮೃತನನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಬಸವರಾಜ(25) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಪ್ರಕರಣ ದಾಖಲಾಗಿ ಜಾಮೀನಿನಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದ ಈತ, ವಿಪರೀತ ಮದ್ಯಪಾನ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಜೈಲಿಗೆ ಹೋದ ಬಗ್ಗೆ ನೊಂದುಕೊಂಡ ಬಸವರಾಜ ಜೀವನದಲ್ಲಿ ಜಿಗುಪ್ಸೆಗೊಂಡು ಕೆಎಂಸಿ ಕ್ಯಾಂಪಸ್‌ನ ಕಾರು ಪಾರ್ಕಿಂಗ್ ಶೆಡ್‌ನ ಕಬ್ಬಿಣದ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.