×
Ad

ಮಣಿಪಾಲ: ಫ್ಲ್ಯಾಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ; ಮೂವರ ಬಂಧನ, ಇಬ್ಬರು ಮಹಿಳೆಯರ ರಕ್ಷಣೆ

Update: 2023-11-27 11:12 IST

ಉಡುಪಿ, ನ.27: ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ವೇಶ್ಯಾ ವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ನ.26 (ರವಿವಾರ) ರಂದು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ ರೆಸಿಡೆನ್ಸಿಯ ಎರಡು ಫ್ಲ್ಯಾಟ್‌ಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಜಯಾನಂದ ಕೆ. ದಾಳಿ ನಡೆಸಿ, ದಂಧೆ ನಡೆಸುತ್ತಿದ್ದ ಗಣೇಶ್, ಸುಧೀರ್ ಮತ್ತು ಮಾರುತಿ ಎಂಬವರನ್ನು ಬಂಧಿಸಿ, ಕೃತ್ಯಕ್ಕೆ ಸಂಬಂಧಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣದ ಆರೋಪಿಗಳು ಜಗದೀಶ ಯಾನೆ ಜಗ್ಗ ಎಂಬಾತನ ಜೊತೆ ಸೇರಿ ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆಯುತ್ತಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News