×
Ad

ಮಣಿಪಾಲ| ಶಾಲಾ ಮಕ್ಕಳ ಆಟೋ ರಿಕ್ಷಾ ಪಲ್ಟಿ: ಮೂವರು ವಿದ್ಯಾರ್ಥಿಗಳಿಗೆ ಗಾಯ

Update: 2024-11-11 16:55 IST

ಮಣಿಪಾಲ: ಶಾಲಾ ಮಕ್ಕಳ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ವೇಳೆ ನಡೆದಿದೆ.

ಮಣಿಪಾಲ ಮಾಧವ ಕೃಪಾ ಶಾಲೆಯ ಮಕ್ಕಳನ್ನು ಸಂಜೆ ಮನೆಗೆ ಕರೆ ತರುತ್ತಿದ್ದ ವೇಳೆ ಮಣಿಪಾಲದಿಂದ ಪರ್ಕಳದ ಕಡೆ ಹೋಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಿಕ್ಷಾದಲ್ಲಿದ್ದ ಮೂವರು ಮಕ್ಕಳಿಗೆ ಗಾಯಗಳಾಗಿರುವ ಬಗ್ಗೆ ತಿಳಿದುಬಂದಿದೆ.

ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News