×
Ad

ಮಣಿಪಾಲ: ಕಾರಿನೊಳಗೆ ರಾತ್ರಿ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು

Update: 2024-08-16 15:57 IST

ಸಾಂದರ್ಭಿಕ ಚಿತ್ರ

ಮಣಿಪಾಲ, ಆ.16: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕರೊಬ್ಬರು ಉಸಿರು ಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಲ್ಲಿ ಆ.14ರಂದು ರಾತ್ರಿ ವೇಳೆ ಸಂಭವಿಸಿರುವುದು ವರದಿಯಾಗಿದೆ.

ಮೃತರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ. ಇವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದು ಕೊಂಡು ಬಂದಿದ್ದು, ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಕಾರಿನ ಚಾಲಕ ಆನಂದ ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿಯೇ ರಾತ್ರಿ ಮಲಗಿದ್ದರು.

ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ ಉಸಿರುಗಟ್ಟಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News