×
Ad

ಸೆ.11ರಂದು ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಬೃಹತ್ ರಕ್ತದಾನ ಶಿಬಿರ

Update: 2024-09-09 20:24 IST

ಉಡುಪಿ: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ, ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘ ಹಾಗೂ ರಕ್ತನಿಧಿ ಕೇಂದ್ರ ಜಿಲ್ಲಾ ಸರಕಾರಿ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರ ಣಾರ್ಥ ಬೃಹತ್ ರಕ್ತದಾನ ಶಿಬಿರ ಸೆ.11 ರಂದು ಬೆಳಗ್ಗೆ 10:30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ.

24ನೇ ವರ್ಷದ ಈ ರಕ್ತದಾನ ಶಿಬಿರವನ್ನು ಕುಂದಾಪುರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು ಎಂ, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೇಶವ ಪೂಜಾರಿ ಎಂ, ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಗೌರವಾಧ್ಯಕ್ಷ ಪ್ರಕಾಶ್ಚಂದ್ರ, ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ಹೆಚ್ ದೇವರಾಜ ಪಾಣ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News