ಮತ್ತಿಹಳ್ಳಿ, ಸುರೇಂದ್ರ ಅಡಿಗ, ಅಂಶುಮಾಲಿಗೆ ವಿಶ್ವಸಾಹಿತ್ಯ ಪುರಸ್ಕಾರ ಪ್ರದಾನ
ಉಡುಪಿ : ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯ ಆಶ್ರಯದಲ್ಲಿ ಬುಧವಾರ ಆಯೋಜಿಸ ಲಾದ ಕರ್ನಾಟಕ ರಾಜ್ಯೋತ್ಸವ ಸಡಗರ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.
ವಿಮರ್ಶನ ಸಾಹಿತ್ಯಕ್ಕೆ ಸುಬ್ರಾಯ ಮತ್ತಿಹಳ್ಳಿ, ಬಹುಭಾಷಾ ಸಾಹಿತ್ಯಕ್ಕೆ ಅಂಶು ಮಾಲಿ ಉಡುಪಿ, ಸಮಗ್ರ ಸಾಹಿತ್ಯಕ್ಕೆ ನೀಲಾವರ ಸುರೇಂದ್ರ ಅಡಿಗ ಅವರಿಗೆ ಪುರಸ್ಕಾರವನ್ನು ಮಣಿಪಾಲ ಮಾಹೆ ಗಾಂಧಿಯನ್ ಸೆಂಟರ್ ಫಾರ್ ಫಿಸಾಸಫಿಕಲ್ ಅರ್ಟ್ಸ್ ಅಂಡ್ ಸೈನ್ಸ್‌ನ ಮುಖ್ಯಸ್ಥ ಪ್ರೊ.ವರದೇಶ ಹಿರೇಗಂಗೆ ಪ್ರದಾನ ಮಾಡಿದರು.
ಬಳಿಕ ಮಾತನಾಡಿದ ವರದೇಶ ಹಿರೇಗಂಗೆ, ಭಾಷೆಯೇ ಒಂದು ಆಭರಣ. ಭಾಷೆಯಲ್ಲಿಯೇ ಸಾಹಿತ್ಯ ಹುಟ್ಟತ್ತದೆ. ಸ್ಥಳೀಯ ಸಾಹಿತ್ಯವೇ ವಿಶ್ವ ಸಾಹಿತ್ಯಕ್ಕೆ ಹೋಗುವ ದಾರಿಯಾಗಿದೆ. ಭಾಷೆಯ ಅಸ್ಮಿತೆಯನ್ನು ಉಳಿಸಿಕೊಂಡು ಎಲ್ಲ ಭಾಷೆಗಳ ಜೊತೆ ಸಹಬಾಳ್ವೆ ಮಾಡುವುದು ಅಗತ್ಯವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಅಧ್ಯಕ್ಷತೆಯನ್ನು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತ ಅಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ಐಎಂಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ.ರಾಜಲಕ್ಷ್ಮೀ ಮಾತನಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೋಶಿ, ಮಲಬಾರ್ ಗೋಲ್ಡ್ ಉಡುಪಿ ವ್ಯವಸ್ಥಾಪಕ ಹಫೀಜ್ ರೆಹಮಾನ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಸ್ವಾಗತಿಸಿದರು. ಪುರಸ್ಕಾರ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ಕಾರ್ಯಕ್ರಮ ನಿರೂಪಿಸಿದರು. ಸಂದ್ಯಾ ಶೆಣೈ ವಂದಿಸಿದರು.