×
Ad

ಜ.9ರಂದು ಸಚಿವ ದಿನೇಶ್ ಗುಂಡೂರಾವ್ ಉಡುಪಿಗೆ ಭೇಟಿ

Update: 2026-01-07 20:20 IST

ಉಡುಪಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ದಿನೇಶ್ ಗುಂಡೂರಾವ್ ಅವರು ಜ.9ರಂದು ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಡಿ.9ರಂದು ಬೆಳಗ್ಗೆ 9ಗಂಟೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುವ ಸಚಿವರು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅಪರಾಹ್ನ 2:00ಗಂಟೆಗೆ ಉಡುಪಿ ಜಿಲ್ಲೆಯ ನಿಟ್ಟೆಗೆ ಆಗಮಿ ಸಲಿದ್ದಾರೆ. ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಬೋಳ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಬಳಿಕ 3:30ಕ್ಕೆ ರಸ್ತೆ ಮಾರ್ಗವಾಗಿ ಉಡುಪಿಗೆ ಆಗಮಿಸುವ ಸಚಿವರು ಮೊದಲು ನಿರ್ಮಾಣ ಹಂತದಲ್ಲಿರುವ ಉಡುಪಿ ಜಿಲ್ಲಾಸ್ಪತ್ರೆಯ ಹೊಸ ಕಟ್ಟಡವನ್ನು ವೀಕ್ಷಿಸಲಿದ್ದಾರೆ. 4:00ಗಂಟೆಗೆ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣ ದಲ್ಲಿ ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕವನ್ನು ಉದ್ಘಾಟಿಸಲಿದ್ದಾರೆ.

ಸಂಜೆ 4:55ಕ್ಕೆ ಕೆಮ್ಮಣ್ಣುಗೆ ಆಗಮಿಸಿ ಅಲ್ಲಿ ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಿಡಂಬಳ್ಳಿ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅವರು ರಸ್ತೆ ಮೂಲಕ ಮಂಗಳೂರಿಗೆ ತೆರಳಿ ಅಲ್ಲಿನ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಮಾಡಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News