ಕಾಪು(ಪಡುಬಿದ್ರಿ), ನ.16: ಜಿಲ್ಲೆಯ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದು ಕುಟುಂಬ ಸಮೇತ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀಮಾರಿಯಮ್ಮ ದೇವಿಯ ದರುಶನ ಪಡೆದರು.

ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ನವನಿರ್ಮಾಣದ ಬಗ್ಗೆ ಮತ್ತು ನವದುರ್ಗಾ ಲೇಖನ ಯಜ್ಞದ ಬಗ್ಗೆ ಸವಿವರವಾದ ಮಾಹಿತಿಯನ್ನು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ನೀಡಿದರು. ದೇವಳದ ಪ್ರಧಾನ ತಂತ್ರಿ ಕುಮಾರಗುರು ತಂತ್ರಿ, ಪ್ರಧಾನ ಅರ್ಚಕ ಶ್ರೀನಿವಾಸ ಮೂರ್ತಿ ಕಲ್ಯಾ ಪ್ರಾರ್ಥಿಸಿ ಪ್ರಸಾದ ನೀಡಿದರು.

ದೇವಸ್ಥಾನದ ಗಂಟೆ ನಾದವನ್ನು ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಅವರು ನೆರವೇರಿಸಿದರು. ಬಳಿಕ ದೇವಿಗೆ ಕಾರ್ತಿಕ ಮಾಸದ ವಿಶೇಷ ಸೇವೆಯಾಗಿರುವ ತುಪ್ಪದ ದೀಪವನ್ನು ಬೆಳಗಿಸಿದರು.

ಸಚಿವರೊಂದಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಬಾಲಾಜಿ ಯೋಗೀಶ್ ಶೆಟ್ಟಿ, ಸದಸ್ಯರಾದ ಮಾಧವ ಆರ್.ಪಾಲನ್, ಶೇಖರ್ ಸಾಲ್ಯಾನ್, ಮನೋಹರ ರಾವ್ ಕಲ್ಯಾ, ರವೀಂದ್ರ ಮಲ್ಲಾರ್, ಜಯಲಕ್ಷ್ಮೀ ಎಸ್.ಶೆಟ್ಟಿ, ಚರಿತಾ ದೇವಾಡಿಗ, ಅದಾನಿ ಸಮೂಹದ ಕಾರ್ಯನಿರ್ವಾಹಕ ನಿದೇಶಕ ಕಿಶೋರ್ ಆಳ್ವ, ಆಸ್ಪೆನ್ ಎಸ್‌ಇಝೆಡ್‌ನ ಮಹಾ ಪ್ರಬಂಧಕ ಅಶೋಕ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಗೀತಾಂಜಲಿ ಸುವರ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಜೆಡಿಎಸ್ ಮುಖಂಡ ಮೊಯಿದಿನ್ ಬಾವ ಮುಂತಾದವರು ಉಪಸ್ಥಿತರಿದ್ದರು.



 


 




 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor