ಮಣಿಪಾಲದಲ್ಲಿ ‘ಅಕ್ಕ ಕೆಫೆ’ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Update: 2025-08-14 20:19 IST
ಉಡುಪಿ, ಆ.14: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಸಂಜೀವಿನಿ ಯೋಜನೆಯಡಿ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ಆರಂಭಿಸಲಾಗಿರುವ ಅಕ್ಕ ಕೆಫೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಸಂಜೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ್ ಸೇರಿದಂತೆ ಸಂಜೀವಿನಿ ಸಂಘಟನೆಯ ಮಹಿಳೆಯರು ಉಪಸ್ಥಿತರಿದ್ದರು.