ಪಡುಬಿದ್ರಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
Update: 2026-08-07 16:43 IST
ಡೇವಿಡ್ ಡಿಸೋಜ
ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ದುಷ್ಕಮಿಗಳ ಗುಂಡಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ.
ಇಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಅವರಿಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.