ಜ.25ರಂದು ಎಂ.ಎಂ.ಹೆಗ್ಡೆ ಪ್ರಶಸ್ತಿ ಪ್ರದಾನ
ಉಡುಪಿ, ಜ.23: ಯಕ್ಷಗಾನ ಕೇಂದ್ರ ಇಂದ್ರಾಳಿ, ಯಕ್ಷಗುರುಕುಲ ಶಿಕ್ಷಣ ಟ್ರಸ್ಟ್ ಇದರ 53ನೇ ವಾರ್ಷಿಕೋತ್ಸವ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಳ ಸಹಯೋಗದಲ್ಲಿ ಜ.25ರ ರವಿವಾರ ಅಪರಾಹ್ನ 3:00ಗಂಟೆಗೆ ಇಂದ್ರಾಳಿಯಲ್ಲಿರುವ ಯಕ್ಷಗಾನ ಕೇಂದ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಾಹೆ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಹೆಯ ಪ್ರೊವೈಸ್ ಚಾನ್ಸಲರ್ ಡಾ. ನಾರಾಯಣ ಸಭಾಹಿತ್, ನಿವೃತ್ತ ಇಂಜಿನಿಯರ್ ವೈ. ಸೀತಾರಾಮ ಶೆಟ್ಟಿ ಉಪಸ್ಥಿತರಿವರು. ಯಕ್ಷಗಾನ ಕೇಂದ್ರದ ಸಲಹಾ ಸಮಿತಿಯ ಅಧ್ಯಕ್ಷ ಪಳ್ಳಿ ಕಿಶನ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ವೇಷಧಾರಿ ಚಂದ್ರಗೌಡ ಗೋಳಿಕೆರೆ ಇವರಿಗೆ ಎಂ.ಎಂ ಹೆಗ್ಡೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಬಳಿಕ ಯಕ್ಷಗಾನ ಕಲಿಕಾ ವಿದ್ಯಾರ್ಥಿಗಳಿಂದ ಹಿಮ್ಮೇಳ ಪ್ರತಿಭೆ ಹಾಗೂ ಸರ್ಟಿಫಿ ಕೇಟ್ ಕೋರ್ಸ್‌ನ ವಿದ್ಯಾರ್ಥಿಗಳಿಂದ ಯಕ್ಷಗಾನ ಪೂರ್ವರಂಗ ಮತ್ತು ಸಂಜೆ 6:00ರಿಂದ ಕೇಂದ್ರದ ವಿದ್ಯಾರ್ಥಿ ಗಳಿಂದ ‘ಸಮರ ಸೌಗಂಧಿಕ’ ಯಕ್ಷಗಾನ ಪ್ರದರ್ಶನವಿರುತ್ತದೆ ಎಂದು ಯಕ್ಷಗಾನ ಕೇಂದ್ರದ ಪ್ರಕಟಣೆ ತಿಳಿಸಿದೆ.