ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ
ಕುಂದಾಪುರ : ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಿಗೆ ರವಿವಾರದಂದು ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮುಖಂಡರಾದ ಅತುಲ್ ಕುಮಾರ್ ಶೆಟ್ಟಿ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ದೇವಸ್ಥಾನದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಬರಮಾಡಿಕೊಂಡು ದೇವಸ್ಥಾನದ ವತಿಯಿಂದ ಗೌರವಿಸಿದರು.