×
Ad

ಮುಳ್ಳಿಕಟ್ಟೆ: ರಾಷ್ಟ್ರೀಯ ಹೆದ್ದಾರಿ ಮಧ್ಯೆ ಪಲ್ಟಿಯಾದ ಸಕ್ಕರೆ ಸಾಗಾಟದ ಲಾರಿ

Update: 2024-07-05 12:10 IST

ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಘಟನೆ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಬೆಳಗ್ಗೆ 7ಗಂಟೆ ಸುಮಾರಿಗೆ ನಡೆದಿದೆ.

ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ ಮಧ್ಯೆಯೇ ಉರುಳಿ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚಾಲಕ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಆಗಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮುಳ್ಳಿಕಟ್ಟೆ ಜಂಕ್ಷನ್ ಸದಾ ಸಮಸ್ಯೆಗಳ ತಾಣವಾಗಿದ್ದು, ಹಲವು ಅಪಘಾತಗಳು ಇಲ್ಲಿ ಸಂಭವಿಸಿವೆ. ಆದುದರಿಂದ ಈ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News