ಆಲ್ವಿನ್ ಪ್ರಕಾಶ್ ಕುಂದರ್ 

ಉಡುಪಿ, ಸೆ.23: ಶಾರ್ಜಾದಲ್ಲಿ ಕುಂದಾಪುರ ಮೂಲದ ಆಲ್ವಿನ್ ಪ್ರಕಾಶ್ ಕುಂದರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಇಂಟರ್ಪೋಲ್ ಮೂಲಕ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಹೋದರ ಸೆ.22ರಂದು ನನ್ನನ್ನು ಭೇಟಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿ ದಂತೆ ಯಾವುದೇ ರೀತಿಯ ನೆರವು ಅಗತ್ಯವಿದ್ದಲ್ಲಿ ಸಹಕರಿಸುವಂತೆ ಮನವಿ ಸಲ್ಲಿಸಿದ್ದಾರೆ. ಆದರೆ ಈ ವಿಚಾರದಲ್ಲಿ ಆರೋಪಿಗಳ ವಿರುದ್ಧ ಲೇಟರ್ ರೊಗೇಟರಿ ಅಥವಾ ರೆಡ್ ಕಾರ್ನರ್ ನೋಟೀಸ್ ಅಥವಾ ಇಂಟರ್ಪೋಲ್‌ನ ನೋಟಿಸ್ ಹೊರಡಿಸುವವರೆಗೆ, ಉಡುಪಿ ಪೊಲೀಸರಿಂದ ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಮಧ್ಯೆ ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕ ಸಾಧಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಇದರಿಂದ ಮೃತರ ಕುಟುಂಬದವರು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ, ತನಿಖೆಯ ಮುಂದಿನ ಪ್ರಗತಿ ಕುರಿತು ಮಾಹಿತಿ ಪಡೆದು ಸಮನ್ವಯ ಸಾಧಿಸಲು ಸಾಧ್ಯವಾಗಲಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor