×
Ad

ಅ. 1ರಿಂದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

Update: 2023-09-29 21:00 IST

ಉಡುಪಿ, ಸೆ.29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಅಕ್ಟೋಬರ್ 1 ಮತ್ತು 2ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದರಲ್ಲಿ ಪುರುಷರಿಗೆ ವಾಲಿಬಾಲ್, ಖೋಖೋ, ಕಬಡ್ಡಿ, ಟೇಬಲ್ ಟೆನಿಸ್, ಈಜು, ಟೆನಿಸ್ ಹಾಗೂ ಬ್ಯಾಡ್ಮಿಂಟನ್ ಸ್ಪರ್ಧೆಗಳು ಹಾಗೂ ಮಹಿಳೆಯರಿಗೆ ಖೋ-ಖೋ, ಕಬಡ್ಡಿ, ಟೇಬಲ್ ಟೆನಿಸ್, ಈಜು, ಟೆನಿಸ್ ಹಾಗೂ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯಲಿವೆ.

ವಿಭಾಗ ಮಟ್ಟದಿಂದ ನೇರವಾಗಿ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲು ಜೂಡೋ ಸ್ಪರ್ಧೆಯನ್ನು ಪುರುಷ ಹಾಗೂ ಮಹಿಳೆ ಯರಿಗೆ ಆಯೋಜಿಸಿದ್ದು, ಇದರ ಆಯ್ಕೆ ಪ್ರಕ್ರಿಯೆ ಅ.1ರಂದು ಚಿಕ್ಕಮಗಳೂರಿನ ಜ್ಯೋತಿ ನಗರದ ಜಿಲ್ಲಾ ಶತಮಾನೋ ತ್ಸವ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುರಿತು ಜೂಡೋ ತರಬೇತುದಾರರರ ಮೊ.ನಂ:7989495494ನ್ನು ಸಂಪರ್ಕಿಸ ಬಹುದು.

ಸ್ಪರ್ಧೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ದೂ.ಸಂಖ್ಯೆ: 0820-2521324, ಮೊ.ನಂ: 9480886467ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News