×
Ad

ಅ.1ಕ್ಕೆ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

Update: 2023-09-27 20:11 IST

ಉಡುಪಿ, ಸೆ.27: ಕರ್ನಾಟಕ ಕ್ರೀಡಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಅ. 1 ಮತ್ತು 2 ರಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅ.2ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡಿನ ಜಿಲ್ಲಾ ಈಜುಕೊಳದಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಸಹಕಾರ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಡಾ.ಎನ್. ಮಂಜುನಾಥ ಪ್ರಸಾದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎನ್ ಶಶಿಕುಮಾರ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News