ರ‍್ಯಾಗಿಂಗ್ ಎಂಬುದು ಕ್ರಿಮಿನಲ್ ಅಪರಾಧ : ನವೀನ್ ಬೋರ್ಕರ್

Update: 2026-08-13 13:58 IST

ಸಾಂದರ್ಭಿಕ ಚಿತ್ರ

ಕಾರ್ಕಳ : ರ‍್ಯಾಗಿಂಗ್ ಎಂಬುದು ಕ್ರಿಮಿನಲ್ ಅಪರಾಧವಾಗಿದ್ದು, ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಎಲ್ಲರೊಂದಿಗೆ ಸ್ನೇಹದಿಂದ ಬಾಳ್ವೆೆ ನಡೆಸಿ ಸಜ್ಜನರಾಗಿ ಸಾಧನೆ ಮಾಡಬೇಕು ಎಂದು ಕಾರ್ಕಳ ಕ್ರೈಂ ವಿಭಾಗದ ಪೋಲೀಸ್ ಅಧಿಕಾರಿ ನವೀನ್ ಬೋರ್ಕರ್ ಅವರು ಅಭಿಪ್ರಾಯಪಟ್ಟರು.

ನಿಟ್ಟೆೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಜರುಗಿದ ಆ್ಯಂಟಿ ರ‍್ಯಾಗಿಂಗ್ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರ‍್ಯಾಗಿಂಗ್ ಎಂಬುದು ನಮ್ಮ ಸಂಸ್ಕೃತಿ ಮತ್ತು ಸಭ್ಯತೆಗೆ ವಿರುದ್ಧವಾಗಿದೆ. ಎಲ್ಲ ವಿದ್ಯಾರ್ಥಿಗಳು ಓದು ಮತ್ತು ಸಾಧನೆಯ ಕಡೆಗೆ ಗಮನ ಕೊಡಬೇಕು. ಯಾರಾದರೂ ರ‍್ಯಾಗಿಂಗ್ ಗೆ ಪ್ರೇರಣೆ, ರ‍್ಯಾಗಿಂಗ್ ಮೂಲಕ ಕಿರುಕುಳ ನೀಡಿದಲ್ಲಿ ಕಾಲೇಜಿನ ಆ್ಯಂಟಿ ರ‍್ಯಾಗಿಂಗ್ ಸಮಿತಿ ಗಮನಕ್ಕೆೆ ತರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ಆಫ್ ಕ್ಯಾಂಪಸ್ ನ ಅಭಿವೃದ್ದಿ ಹಾಗೂ ನಿರ್ವಹಣಾ ವಿಭಾಗದ ನಿರ್ದೇಶಕ ಎ.ಯೊಗೀಶ್ ಹೆಗ್ಡೆೆ ಮಾತನಾಡಿದರು.

ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಚಿಪ್ಳೂಣ್ಕರ್ ಸ್ವಾಗತಿಸಿದರು. ಉಪಪ್ರಾಂಶುಪಾಲ ಡಾ.ನಾಗೇಶ್ ಪ್ರಭು ವಂದಿಸಿದರು. ಮಾನವಿಕ ವಿಭಾಗದ ಮುಖ್ಯಸ್ಥ ಹಾಗೂ ಹುಡುಗರ ಹಾಸ್ಟೆಲ್ ನ ಚೀಫ್ ವಾರ್ಡನ್ ಡಾ.ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News