×
Ad

ತ್ರಿಶಾ ಕಾಲೇಜಿನಲಿ ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ

Update: 2023-10-05 19:25 IST

ಉಡುಪಿ: ಸಮಾಜ ಸೇವೆ ಒಂದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಉಡುಪಿ ಜಿಲ್ಲಾ ರೆಡ್‌ಕ್ರಾಸ್‌ನ ಗೌರವ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದ್ದಾರೆ.

ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ನಲ್ಲಿ ಯುವ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಕಾಲೇಜುಗಳಲ್ಲಿ ಯುವ ರೆಡ್‌ಕ್ರಾಸ್ ಘಟಕಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದವರು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗುರುಪ್ರಸಾದ್ ರಾವ್ ವಹಿಸಿದ್ದರು. ಕಾಲೇಜಿನಲ್ಲಿ ಯುವರೆಡ್‌ಕ್ರಾಸ್ ಮೂಲಕ ರಕ್ತದಾನ ಶಿಬಿರ, ಪ್ರಥಮ ಚಿಕಿತ್ಸಾ ತರಬೇತಿ ಹಾಗೂ ಅನೇಕ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದವರು ತಿಳಿಸಿದರು.

ಕಾರ್ಯಕ್ರಮ ಅಧಿಕಾರಿ ಪ್ರೊ.ಚೇತನಾ ಸುನೀಲ್, ಘಟಕದ ನಾಯಕರಾದ ಅನನ್ಯ ಮತ್ತು ಖುಷಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News