×
Ad

ಕಾಪು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಶ್ರೀಧರಮೂರ್ತಿ ಆಯ್ಕೆ

Update: 2023-10-09 22:41 IST

ಶಿರ್ವ, ಅ.9: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತುತಿ, ಕಾಪು ತಾಲ್ಲೂಕು ಘಟಕದ 5ನೇ ಕನ್ನಡ ಸಾಹಿತ್ಯ ಸಮ್ಮೇಳನವು ನ.4 ರಂದು ಶನಿವಾರ ಬಂಟಕಲ್ಲು ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರಗಲಿದ್ದು, ಸಮ್ಮೇನಾಧ್ಯಕ್ಷರಾಗಿ ನಿವೃತ್ತ ಉಪನ್ಯಾಸಕ, ಕನ್ನಡ ಸಂಘಟಕ, ಹವ್ಯಾಸಿ ಯಕ್ಷಗಾನ - ರಂಗ ಕಲಾವಿದ ಕೆ.ಎಸ್. ಶ್ರೀಧರಮೂರ್ತಿ ಶಿರ್ವ ಆಯ್ಕೆಯಾಗಿದ್ದಾರೆ.

ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಲ್ಕು ದಶಕಕ್ಕೂ ಹೆಚ್ಚಿನ ಅವಧಿಯಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು, ಬಡಗುತಿಟ್ಟು ಯಕ್ಷಗಾನದಲ್ಲಿ ಹವ್ಯಾಸಿ ವೇಷಧಾರಿ, ಅರ್ಥಧಾರಿ ಆಗಿರುವ ಅವರ ಬರಹಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಗಮಕದಲ್ಲಿ ವ್ಯಾಖ್ಯಾನಕಾರರಾಗಿ, ಅಷ್ಟಾವಧಾನ ದಲ್ಲಿ ಪ್ರಚ್ಛಕರಾಗಿ ಅವರು ಗಮನಸೆಳೆದಿದ್ದಾರೆ. ಕೃಷಿ, ಹೈನುಗಾರಿಕೆಗಳಲ್ಲೂ ಆಸಕ್ತಿ ಅನುಭವಿ ಹೊಂದಿದ್ದಾರೆ.

ಈ ಬಾರಿಯ ಸಮ್ಮೇಳನವು ವಿದ್ಯಾರ್ಥಿಗಳನ್ನೇ ಕೇಂದ್ರೀಕರಿಸಿ, ಅವರಲ್ಲಿ ಕನ್ನಡ ಪ್ರೀತಿಯನ್ನು ಹೆಚ್ಚಿಸುವ ಪ್ರಯತ್ನವಾಗಿದ್ದು, ಇದಕ್ಕೆ ಪೂರಕವಾಗಿ ಶಿರ್ವ ಪರಿಸರದಲ್ಲಿ ಹಲವಾರು ಕನ್ನಡ ಮನಸ್ಸುಗಳನ್ನು ಪ್ರೇರೇಪಿಸಿದ, ಅಪಾರ ಅಭಿಮಾನಿ ಶಿಷ್ಯ ವೃಂದ ಹೊಂದಿರುವ ಕೆ.ಎಸ್.ಶ್ರೀಧರಮೂರ್ತಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಕಸಾಪ ಕಾಪು ತಾಲ್ಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News