×
Ad

ಪ್ರವೀಣ್ ಕಿರುಕುಳದಿಂದ ಐನಾಝ್ ಆತನ ನಂಬರ್ ಬ್ಲಾಕ್ ಮಾಡಿದ್ದಳು: ಸಹೋದರ ಅಸಾದ್

Update: 2023-11-17 18:32 IST

ಉಡುಪಿ: ಆರೋಪಿ ಪ್ರವೀಣ್ ಚೌಗುಲೆ ಕಿರುಕುಳದಿಂದ ಐನಾಝ್, ಆತನ ಮೊಬೈಲ್ ನಂಬರನ್ನು ಬ್ಲಾಕ್ ಮಾಡಿ ಇಟ್ಟಿದ್ದಳು. ಆತನ ಕಿರುಕುಳದ ಬಗ್ಗೆ ಮನೆಯಲ್ಲೂ ಕೂಡ ಹೇಳಿರಲಿಲ್ಲ. ಈ ವಿಚಾರ ಹೇಳುತ್ತಿದ್ದರೆ ತಂದೆ ಅವಳನ್ನು ಕೆಲಸಕ್ಕೆ ಹೋಗಬೇಡ ಎನ್ನುತ್ತಾರೆಂಬ ಭಯ ಅವಳಿಗೆ ಇತ್ತು ಎಂದು ಮೃತ ಐನಾಝ್ ಸಹೋದರ ಅಸಾದ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರು ಮುಂದೆ ಬರುತ್ತಿದ್ದಾರೆ. ಆದುದರಿಂದ ಅವರಿಗೆ ಭದ್ರತೆ ಬೇಕು. ಅವರಿಗೆ ಯಾರಾದರೂ ಕಿರುಕುಳ ನೀಡಿದರೆ ಮಾಹಿತಿ ಕೊಡುವ ವ್ಯವಸ್ಥೆ ಬರಬೇಕು. ಹಿಂದೂ ಮುಸ್ಲಿಂ ಎಲ್ಲ ಮಹಿಳೆಯರಿಗೂ ಭದ್ರತೆ ಬೇಕು ಎಂದು ಆಗ್ರಹಿಸಿದರು.

ಕೆಲಸ ಮಾಡುವ ಸ್ಥಳದಲ್ಲಿ ಕಿರುಕುಳ ಇದ್ದರೆ ಮಹಿಳೆಯರು ಹೇಳಿ ಕೊಳ್ಳುವುದಿಲ್ಲ. ಆದುದರಿಂದ ತಮ್ಮ ಸಮಸ್ಯೆ ಹೇಳಿಕೊಳ್ಳಲು ಮಹಿಳೆಯರಿಗೆ ಅವಕಾಶ ಸಿಗಬೇಕು. ಅದಕ್ಕಾಗಿ ಪ್ರತಿ ಜಿಲ್ಲೆಯಲ್ಲೂ ಮಹಿಳಾ ಸೆಲ್ ಸ್ಥಾಪಿಸಬೇಕು ಮತ್ತು ಅದನ್ನು ಬಲಿಷ್ಠ ಮಾಡಬೇಕು. ಮಹಿಳೆಯರು ಮನೆಯಲ್ಲಿ ಕುಳಿತು ಕೊಳ್ಳುವುದು, ಮದುವೆಯಾಗುವುದು ಮಾತ್ರ ಅಲ್ಲ. ಕೆಲಸ ಮಾಡುವ ಅವಕಾಶ ಮಾಡಬೇಕು ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News