ಕೋಡಿ ಬ್ಯಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ ಕ್ರೀಡೋತ್ಸವಕ್ಕೆ ಚಾಲನೆ
ಕುಂದಾಪುರ, ನ.25: ಕೋಡಿ ಬ್ಯಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ 2023-24ನೇ ಸಾಲಿನ ಕ್ರೀಡೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಆವರ್ಸೆ ಸರಕಾರಿ ಪ್ರೌಢಶಾಲೆಯ ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ದೈಹಿಕ ಶಿಕ್ಷಕ ಅಝಾದ್ ಮಹಮ್ಮದ್ ಮಾತನಾಡಿ, ಕ್ರೀಡೋತ್ಸವ ಬೆಳೆಸಿಕೊಂಡ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಿ, ಶಿಸ್ತನ್ನು ರೂಪಿಸಿಕೊಂಡು ಸೌಹಾರ್ದತೆಯ ಬದುಕಿನೊಂದಿಗೆ ಆರೋಗ್ಯವಂತ ಭಾರತದ ಸದೃಢ ಪ್ರಜೆಗಳಾಗಿ ಬಾಳುತ್ತಾರೆ ಎಂದರು.
ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುಲ್ ರೆಹಮಾನ್ ವಹಿಸಿದ್ದರು. ಪಥ ಸಂಚಲನದ ಮೂಲಕ ಅತಿಥಿ ಗಣ್ಯರಿಗೆ ವಿದ್ಯಾರ್ಥಿಗಳಿಂದ ಗೌರವ ಸಮರ್ಪಿಸಲಾಯಿತು. ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡೆಗೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಕ್ರೀಡೆಗಳ ಕ್ರೀಡಾ ಸ್ತಬ್ಧ ಚಿತ್ರ ಅನಾವರಣ ಗೊಳಿಸಲಾಯಿತು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯೋಜಕ ಆಕಾಶ್ ಎಸ್., ಸಲಹಾ ಮಂಡಳಿಯ ಸದಸ್ಯ ಹಾಜಿ ಅಬ್ಬುಷೇಕ್ ಸಾಹೇಬ್, ಉರ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಜಟ್ಟಪ್ಪ, ಕನ್ನಡ ಅನುದಾನಿತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಜಯಶೀಲ ಶೆಟ್ಟಿ, ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಅಶ್ವಿನಿ ಶೆಟ್ಟಿ, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲ ಡಾ.ಸುರೇಶ್ ಶೆಟ್ಟಿ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಪೂರ್ಣಿಮ ಶೆಟ್ಟಿ, ಪದವಿ ವಿಭಾಗದ ಪ್ರಾಂಶುಪಾಲ ಡಾ.ಶಮೀರ್ ಹಾಗೂ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಿದ್ದಪ್ಪಕೆ.ಎಸ್. ಉಪಸ್ಥಿತರಿದ್ದರು.
ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕಿ ವೀಣಾ ವಿವಿಧ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಾಲೇಜಿನ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಬ್ಯಾರೀಸ್ ವಿಶ್ವಸ್ಥ ಮಂಡಳಿಯ ಸದಸ್ಯ ಡಾ.ಆಸೀಫ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕನ್ನಡ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮುಹಮದ್ ಇಲ್ಯಾಸ್ ಸ್ವಾಗತಿಸಿದರು. ಬ್ಯಾರೀಸ್ ಶಿಕ್ಷಣ ಮಹಾ ವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ರಕ್ಷತ್ ಕಾಂಚನ್ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸಂದೀಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.