×
Ad

ಶಿಕ್ಷಣದಿಂದ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಯಶ್‌ಪಾಲ್ ಸುವರ್ಣ

Update: 2023-11-25 19:05 IST

ಉಡುಪಿ, ನ.25: ಶಿಕ್ಷಣದಿಂದ ಮಾತ್ರ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಷ್ಪಾನಂದ ಫೌಂಡೇಶನ್ ಮೂಲಕ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಪುಷ್ಪಾನಂದ ಫೌಂಡೇಶನ್ ಪ್ರವರ್ತಕ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.

ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಮಕ್ಕಳ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯುಸಿ ಕಲಿಯುತ್ತಿರುವ ಸುಮಾರು 17,000 ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಪೆನ್ ವಿತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಯೋಗ, ಈಜು ತರಬೇತಿ, ಸಂಗೀತದಂತಹ ಪಠ್ಯೇತರ ಚಟು ವಟಕೆಗಳಿಗೂ ಪ್ರೋತ್ಸಾಹ ಯೋಜನೆ ರೂಪಿಸಲಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಡಾ.ಜಿ.ಶಂಕರ್ ಸರಕಾರಿ ಮಹಿಳೆಯರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಮಾತನಾಡಿದರು. ನಗರ ಸಭಾ ಸದಸ್ಯೆ ರಶ್ಮಿ ಸಿ.ಭಟ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಶಿಕ್ಷಣ ತಜ್ಞ ವಿಶ್ವನಾಥ ಬಾಯರಿ, ಕಾಲೇಜಿನ ಪ್ರಾಂಶುಪಾಲ ಡಾ.ಸುಮಾ ಎಸ್., ಪ್ರೌಢಶಾಲೆ ಮುಖ್ಯೋಪಾಧ್ಯಾ ಯನಿ ಇಂದಿರಾ, ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಉಪಾಧ್ಯಕ್ಷ ಶೇಕ್ ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News