×
Ad

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಭದ್ರಗೊಳಿಸಿ: ಡಾ.ಭಾಸ್ಕರ್ ಶೆಟ್ಟಿ

Update: 2023-11-27 19:43 IST

ಉಡುಪಿ, ನ.27: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸಂವಿಧಾನ ದಿನವನ್ನು ರವಿವಾರ ಆಚರಿಸಲಾಯಿತು.

ಸಂವಿಧಾನದ ಪೂರ್ವ ಪೀಠಿಕೆ ಬೋಧಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ನಡೆಸುಕೊಟ್ಟ ಕಾಲೇಜಿನಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ ಎಸ್. ಮಾತನಾಡಿ, ಇಂದಿನ ಯುವ ಜನತೆಯು ಸಂವಿಧಾನದ ಮಹತ್ವವನ್ನು ಅರಿಯಲು ಅಗತ್ಯವಾಗಿ ಸಂವಿಧಾನದ ಪೂರ್ವ ಪೀಠಿಕೆಯಲ್ಲಿ ತಿಳಿಸಲಾದ ನಮ್ಮ ರಾಜಕೀಯ ವ್ಯವಸ್ಥೆಯ ಸ್ವರೂಪ ಮತ್ತು ಜನರ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದುಕೊಳ್ಳುವುದು ಅಗತ್ಯವಾಗಿದೆ. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಭದ್ರಗೊಳಿಸುವಲ್ಲಿ ಯುವಜನತೆಯು ಪಣತೊಡಬೇಕೆಂದು ಹೇಳಿದರು.

ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕ ಮಂಜುನಾಥ ಸ್ವಾಗತಿಸಿದರು. ಕ್ಯಾಂಪಸ್ ರಾಯಭಾರಿ ಡಾ.ರಾಜೇಂದ್ರಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಮಾರಂಭದಲ್ಲಿ ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ಹೆಚ್ಚಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News