ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು
Update: 2023-11-27 20:20 IST
ಕಾರ್ಕಳ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮನ್ನಬೆಟ್ಟು ರಾಮದೇವ ಬಸ್ ನಿಲ್ದಾಣದ ಬಳಿ ನ.26ರಂದು ರಾತ್ರಿ ನಡೆದಿದೆ.
ಮೃತರನ್ನು ಬೋಳ ಗ್ರಾಮದ ಗೋಪಾಲ(46) ಎಂದು ಗುರುತಿಸಲಾಗಿದೆ. ಇವರು ಕೆಲಸ ಮುಗಿಸಿ ವಾಪಾಸ್ಸು ಮನೆಯ ಕಡೆಗೆ ಮಂಜರಪಲ್ಕೆಯಿಂದ ರಸ್ತೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿರುವಾಗ ಕಾರ್ಕಳ ಕಡೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಅಪಘಾತ ನಡೆಸಿದ ಚಾಲಕ, ವಾಹನವನ್ನು ನಿಲ್ಲಿಸದೇ ಪರಾರಿ ಯಾಗಿದ್ದಾನೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಗೋಪಾಲ ಕಾರ್ಕಳ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.