×
Ad

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Update: 2023-11-27 21:54 IST

ಉಡುಪಿ, ನ.27: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖ್ ಸಮುದಾಯದ ಕಾನೂನು ಪದವೀಧರರಿಂದ ವಕೀಲಿ ವೃತ್ತಿ ಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡುವ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 16ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ; 0820-2574596ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News