ಪಂಚರಾಜ್ಯ ಚುನಾವಣಾ ಫಲಿತಾಂಶ: ಬಿಜೆಪಿ ವಿಜಯೋತ್ಸವ
Update: 2023-12-03 20:33 IST
ಉಡುಪಿ, ಡಿ.3: ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ್ ರಾಜ್ಯಗಳಲ್ಲಿ ಸ್ಪಷ್ಟ ಬಹುಮತ ದೊಂದಿಗೆ ಬಿಜೆಪಿ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿ ಬಳಿ ಇಂದು ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ, ಮುಖಂಡರಾದ ಸುಪ್ರಸಾದ್ ಶೆಟ್ಟಿ, ಶ್ಯಾಮಲಾ ಕುಂದರ್, ದಿನಕರ ಶೆಟ್ಟಿ ಹೆರ್ಗ ಮೊದಲಾದವರು ಉಪಸ್ಥಿತರಿದ್ದರು.