×
Ad

ಜಿಲ್ಲಾ, ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

Update: 2023-12-04 20:15 IST

ಉಡುಪಿ, ಡಿ.4: ಕೃಷಿ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ನಡೆಯುವ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಇದರಲ್ಲಿ ಭಾಗವಹಿಸಬಹುದಾಗಿದೆ.

ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿ, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 10ರೊಳಗೆ ಇ-ಮೇಲ್ ಅಥವಾ ಖುದ್ದಾಗಿ/ಪೋಸ್ಟ್ ಮೂಲಕ ಜಂಟಿ ಕೃಷಿ ನಿರ್ದೇಶಕರ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬಹುದು.

ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ಸ್ಪರ್ಧಿಯು ಸಿಹಿ ಅಥವಾ ಖಾರ (ಸಸ್ಯಾಹಾರಿ ತಿನಿಸುಗಳು ಮಾತ್ರ) ಒಂದೇ ತಿನಿಸು ತಯಾರಿಸುವ ಅವಕಾಶವಿದ್ದು, ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು, ಮನೆಯಲ್ಲಿಯೇ ತಯಾರಿಸಿ, ಡಿ.14ರಂದು ಬೆಳಗ್ಗೆ 11 ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಛೇರಿಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಡಿ.23ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News