×
Ad

ಎಪಿಡೆಮಿಯಾಲಜಿಸ್ಟ್ ಹುದ್ದೆಗೆ ನೇರ ಸಂದರ್ಶನ

Update: 2023-12-06 22:04 IST

ಉಡುಪಿ, ಡಿ.6: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾ ಘಟಕದ ಐಡಿಎಸ್‌ಪಿ ಕಾರ್ಯಕ್ರಮದಲ್ಲಿ ಕುಂದಾಪುರದ ಸಾರ್ವಜನಿಕ ಆರೋಗ್ಯ ಘಟಕಕ್ಕೆ ಅಗತ್ಯವಿರುವ ಎಪಿಡೆಮಿಯಾಲಜಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಡಿಸೆಂಬರ್ 11ರಂದು ಬೆಳಗ್ಗೆ 10:30ರಿಂದ ಮಧ್ಯಾಹ್ನ 1:30ರವರೆಗೆ ನಗರದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಮೆಡಿಕಲ್ ಪದವಿಯೊಂದಿಗೆ ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಇನ್ ಪ್ರಿವೆಂಟೀವ್ ಅಂಡ್ ಸೋಷಿಯಲ್ ಮೆಡಿಸಿನ್/ ಪಬ್ಲಿಕ್ ಹೆಲ್ತ್, ಎಪಿಡೆಮಿಯೋಲಾಜಿ ಅಥವಾ ಯಾವುದೇ ಮೆಡಿಕಲ್ ಪದವಿಯೊಂದಿಗೆ ಪಬ್ಲಿಕ್ ಹೆಲ್ತ್‌ನಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News