×
Ad

ಯಕ್ಷಗಾನ ಕಲೆ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಕೃಷ್ಣಾಪುರ ಶ್ರೀ

Update: 2023-12-07 20:18 IST

ಉಡುಪಿ, ಡಿ.7: ಯಕ್ಷಗಾನ ನಮ್ಮ ಮಣ್ಣಿನ ಜಾನಪದ ಕಲೆ. ಈ ಕಲೆ ಸಂಗೀತ, ನೃತ್ಯ, ವೇಷ ಸೇರಿದಂತೆ ಎಲ್ಲ ರೀತಿಯ ಮನರಂಜನೆಯನ್ನು ಒಳ ಗೊಂಡಿದೆ. ಈ ಮೂಲಕ ಯಕ್ಷಗಾನ ಕಲೆಯು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಎಂದು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಶ್ರೀಕೃಷ್ಣ ಮಠ, ಪರ್ಯಾಯ ಕೃಷ್ಣಾಪುರ ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷಗಾನ ಕಲಾರಂಗಗಳ ಸಹಯೋಗ ದೊಂದಿಗೆ ಉಡುಪಿ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾದ ಕಿಶೋರ ಯಕ್ಷಗಾನ ಸಂಭ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಗಳಾಗಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಕೆ.ಅಶೋಕ್ ಕಾಮತ್, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮಂಗಳೂರಿನ ವೈದ್ಯ ಡಾ.ಜೆ.ಎನ್.ಭಟ್, ಯಕ್ಷಗಾನ ಕಲಾರಂಗ ಅಧ್ಯಕ್ಷ ಎಂ.ಗಂಗಾಧರ ರಾವ್, ಉಪಾಧ್ಯಕ್ಷರಾದ ವಿ.ಜಿ.ಶೆಟ್ಟಿ, ಎಸ್.ವಿ.ಭಟ್, ಗೋಕುಲ್‌ದಾಸ್ ಪ್ರಭು ಉಪಸ್ಥಿತರಿದ್ದರು.

ಯಕ್ಷ ಶಿಕ್ಷಣ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೆ.ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಾರಾಯಣ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News