ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಕೊಲ್ಲೂರು, ಡಿ.7: ಅನಾರೋಗ್ಯದಿಂದ ಬಳಲುತ್ತಿದ್ದ ಬೆಳ್ಳಾಲ ಗ್ರಾಮದ ನಂದ್ರೋಳಿಯ ಹಾಡಿಮನೆ ನಿವಾಸಿ ಪಾರ್ವತಿ ನಾಯ್ಕ(66) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.6ರಂದು ರಾತ್ರಿ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜೆಕಾರು : ಅನಾರೋಗ್ಯದಿಂದ ಬಳಲುತ್ತಿದ್ದ ಮರ್ಣೆ ಗ್ರಾಮ ಸಿಲೆಸ್ತಿನ್ ಅಲ್ಮೇಡಾ(59) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.6ರಂದು ಸಂಜೆ ಮನೆಯ ಹಾಲ್‌ನ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ: ಕಾಲಿನ ನರದ ಸಮಸ್ಯೆ, ಸಾಲಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಗಂಗೊಳ್ಳಿಯ ದೇವದಾಸ(50) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.6ರಂದು ಮಧ್ಯಾಹ್ನ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.