×
Ad

ಮಂಗಳೂರು ವಿವಿ ಮಟ್ಟದ ಮೃದು ಕೌಶಲ್ಯ ಕಾರ್ಯಾಗಾರ

Update: 2023-12-10 17:52 IST

ಉಡುಪಿ, ಡಿ.10: ಮೃದು ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಸಿಕೊಳ್ಳುವುದರಿಂದ ವೃತ್ತಿಪರ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ವಿವಿಧ ಕೆಲಸದ ಒತ್ತಡ ಮತ್ತು ಪರಿಸರದಲ್ಲಿ ಹೊಂದಿಕೊಂಡು ಹೋಗಲು ಮೃದು ಕೌಶಲ್ಯಗಳು ಸಹಾಯ ಮಾಡುತ್ತದೆ. ಸಂವಹನ, ಹೊಂದಾಣಿಕೆ, ನಾಯಕತ್ವ ಮತ್ತು ಮಾನವತಾ ಗುಣಗಳಾದ ಮೃದು ಕೌಶಲ್ಯಗಳು ವೃತ್ತಿ ಜೀವನದಲ್ಲಿ ಬಹಳ ಮುಖ್ಯ ಎಂದು ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ಗ್ರಾಮೀಣಾಭಿವೃದ್ಧಿ ವಿಭಾಗದ ಸಹ ಪ್ರಾಧ್ಯಾಪಕ ಡಾ.ಜಿ.ರಾಬಾರ್ಟ್ ಕ್ಲೈವ್ ಹೇಳಿದ್ದಾರೆ.

ಉಡುಪಿ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಗ್ರಾಮೀಣ ಅಭಿವೃದ್ಧಿ ವಿಭಾಗ ಮತ್ತು ಐಕ್ಯೂಎಸಿ ಜಂಟಿ ಆಶ್ರಯದಲ್ಲಿ ಕಾಲೇಜಿನ ಯು.ಜಿ.ಎ.ವಿ ಸಭಾಂಗಣದಲ್ಲಿ ಆಯೋಜಿಸ ಲಾದ ಒಂದು ದಿನದ ವಿಶ್ವವಿದ್ಯಾನಿಲಯ ಮಟ್ಟದ ಮೃದು ಕೌಶಲ್ಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಎಸ್. ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕ ಸೋಜನ್ ಕೆ.ಜಿ., ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ.ವಾಣಿ ಆರ್.ಬಲ್ಲಾಳ್ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಡಿ. ಸ್ವಾಗತಿಸಿದರು. ವಿದ್ಯಾರ್ಥಿನಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಗ್ರೀಷ್ಮ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News