ಕರವೇ ಉಡುಪಿ ಜಿಲ್ಲಾ ಘಟಕದ ಉದ್ಘಾಟನೆ
Update: 2023-12-10 17:54 IST
ಉಡುಪಿ, ಡಿ.10: ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ನಗರದ ಅಜ್ಜರಕಾಡು ಜಿಲ್ಲಾ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ರವಿವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆ ಸ್ಥಾಪನೆ ಹಿಂದೆ ಸಾಕಷ್ಟು ಜನರ ಕೊಡುಗೆ ಇದೆ. ಸಂಘಟನೆಗಾಗಿ ಲಾಟಿ ಏಟಿ ತಿಂದವರು ರಕ್ತಸುರಿಸಿದವರು ಹೀಗೆ ತಮ್ಮ ಸ್ವಂತ ಖರ್ಚಿನಲ್ಲಿ ಸಂಘಟನೆಯನ್ನು ಮುಂದೆ ನಡೆಸಿಕೊಂಡು ಹೋದವರಿಂದ ಸಂಘಟನೆ ಇಷ್ಟು ದೊಡ್ಡದಾಗಿ ಬೆಳೆದಿದೆ. ಎಂದರು.
ಈ ಸಂದರ್ಭದಲ್ಲಿ ನೂತನ ಜಿಲ್ಲಾಧ್ಯಕ್ಷ ಪ್ರಭಾಕರ ಪೂಜಾರಿ ಅವರಿಗೆ ಜವಾಬ್ದಾರಿ ಹಸ್ತಾಂತರಿಸಲಾಯಿತು. ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಅನ್ಸಾರ್ ಅಹ್ಮದ್, ಎಂ.ಹನೀಫ್ ಮೊದಲಾದವರು ಉಪಸ್ಥಿತರಿದ್ದರು.