ಮನೆಯ ದೇವರಕೋಣೆಯಲ್ಲಿದ್ದ ಚಿನ್ನಾಭರಣ ಕಳವು
Update: 2023-12-11 21:01 IST
ಸಾಂದರ್ಭಿಕ ಚಿತ್ರ
ಉಡುಪಿ, ಡಿ.11: ಮನೆಯೊಂದಕ್ಕೆ ನುಗ್ಗಿದ ಕಳ್ಳರು ದೇವರ ಕೋಣೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಿರುವ ಘಟನೆ ಪುತ್ತೂರು ಗ್ರಾಮದಲ್ಲಿ ಡಿ.9ರಂದು ರಾತ್ರಿ ವೇಳೆ ನಡೆದಿದೆ.
ಶಶಿಕಾಂತ್ ಎಂಬವರ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ದೇವರ ಕೋಣೆಯಲ್ಲಿದ್ದ ಚಿನ್ನದ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 2,50,000 ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.