×
Ad

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

Update: 2023-12-14 21:03 IST

ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ - https://shp.karnataka.gov.in/- ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 22ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370005 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News