ಉಡುಪಿ ಎಂಜಿಎಂ ಕಾಲೇಜಿನ ನವೀಕೃತ ಮುದ್ದಣ ಮಂಟಪ ಉದ್ಘಾಟನೆ
ಉಡುಪಿ ಡಿ 16: ವಿದ್ಯಾರ್ಥಿಗಳು ಸಾಮಾನ್ಯ ಶಿಕ್ಷಣದೊಂದಿಗೆ ಜೀವನವನ್ನು ಮುನ್ನಡೆಸಿ ಸಾಧಿಸುವ ವಿದ್ಯೆಯನ್ನು ಕೂಡ ಕಲಿಯಬೇಕು. ಆದರೆ ಇಂದು ಯುವ ಜನತೆ ಅತಿಯಾದ ಮೊಬೈಲ್ ಬಳಕೆಯಿಂದ ನಮ್ಮ ಆಚಾರ ವಿಚಾರ ದಿಂದ ದೂರ ಸಾಗುತ್ತಿದೆ ಎಂದು ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಅಮೃತಮಹೋತ್ಸವ ಸಂಭ್ರಮದಲ್ಲಿರುವ ಉಡುಪಿಯ ಎಂಜಿಎಂ ಕಾಲೇಜಿನ ನವೀಕೃತ ಮುದ್ದಣ ಮಂಟಪವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು. ಉಡುಪಿಯ ಸಾಂಸ್ಕೃತಿಕ ಬೆಳವಣಿಗೆಯಲ್ಲಿ ಎಂಜಿಎಂ ಕಾಲೇಜಿನ ಪಾತ್ರ ಮಹತ್ವ ದಾಗಿದೆ ಎಂದರು.
ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷ ಟಿ.ಸತೀಶ್ ಯು.ಪೈ ಅಧ್ಯಕ್ಷತೆ ವಹಿಸಿದ್ದರು. ಮಾಹೆ ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್. ಎಸ್ ನಾಯ್ಕ್ ಉಪಸ್ಥಿತರಿದ್ದರು.
ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ್ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ವಂದಿಸಿದರು. ಕಾಲೇಜಿನ ಉಪನ್ಯಾಸಕಿ ದೀಪಾಲಿ ಕಾರ್ಯಕ್ರಮ ನಿರೂಪಿಸಿದರು.