ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
Update: 2023-12-19 18:27 IST
ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸುಹಾಸಂ ಆಮಂತ್ರಣ ಪತ್ರಿಕೆಯನ್ನು ಉಡುಪಿಯ ಶಾಸಕ ಯಶ್ಪಾಲ್ ಸುವರ್ಣ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಸ್ವಾಗತ ಸಮಿತಿಯ ಅಧ್ಯಕ್ಷ ಮಹೇಶ್ ಠಾಕೂರ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಜಿಲ್ಲಾ ಸಮಿತಿಯ ಭುವನ ಪ್ರಸಾದ್ ಹೆಗ್ಡೆ, ನಾರಾಯಣ ಮಡಿ, ನಾಗರಾಜ್ ಹೆಬ್ಬಾರ್, ನರಸಿಂಹಮೂರ್ತಿ, ಮೋಹನ್ ಹಂದಾಡಿ, ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ರಂಜಿನಿ ವಸಂತ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸದಸ್ಯರಾದ ಸುಶೀಲಾ ರಾವ್, ಹಫೀಜ್ ರೆಹಮಾನ್, ಸ್ವಾಗತ ಸಮಿತಿ ಕಾರ್ಯದರ್ಶಿ ಗುರುರಾಜ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.