×
Ad

ಉಡುಪಿ ಧರ್ಮಪ್ರಾಂತ್ಯದಿಂದ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ದೇಣಿಗೆ

Update: 2023-12-19 18:30 IST

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ ಮಂಗಳವಾರ ದೇಣಿಗೆ ನೀಡಲಾಯಿತು.

ಉಡುಪಿ ಕಕ್ಕುಂಜೆಯ ಪಾಲನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ದೇಣಿಗೆಯನ್ನು ಹಸ್ತಾಂತರಿಸಿದರು. ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಹಾಜರಿದ್ದರು.

ಈ ಸಂದರ್ಭ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯ ದರ್ಶಿ ನಝೀರ್ ಪೊಲ್ಯ ಹಾಗೂ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News