×
Ad

ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ಪ್ರವೀಣ್ ಚೌಗುಲೆ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ

Update: 2023-12-20 20:43 IST

ಪ್ರವೀಣ್ ಚೌಗುಲೆ 

ಉಡುಪಿ : ನೇಜಾರು ತಾಯಿ ಮತ್ತು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ(39) ಜಾಮೀನು ಕೋರಿ ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶವನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಡಿ.21ಕ್ಕೆ ಮುಂದೂಡಿದೆ.

ಆರೋಪಿ ಪ್ರವೀಣ್ ಚೌಗುಲೆ ಜಾಮೀನಿಗಾಗಿ ಡಿ.14ರಂದು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಡಿ.20ರಂದು ಆಕ್ಷೇಪಣೆ ಸಲ್ಲಿಸಲು ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಅವರಿಗೆ ನ್ಯಾಯಾಲಯ ಅವಕಾಶ ನೀಡಿತ್ತು. ಆದರೆ ಇಂದು ಅವರು ರಜೆ ಮಾಡಿರುವ ಹಿನ್ನೆಲೆಯಲ್ಲಿ ಕುಂದಾಪುರದ ಸರಕಾರಿ ಅಭಿಯೋಜಕಿ ಇಂದಿರಾ ನಾಯಕ್, ನ್ಯಾಯಾಲಯಕ್ಕೆ ಹಾಜರಾಗಿ ಆಕ್ಷೇಪಣೆ ಸಲ್ಲಿಸಲು ಡಿ.21ರಂದು ದಿನಾಂಕ ನೀಡುವಂತೆ ಕೋರಿಕೊಂಡರು.

ಅದರಂತೆ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸುವ ದಿನಾಂಕವನ್ನು ಡಿ.21ಕ್ಕೆ ಮುಂದೂಡಿ ಆದೇಶ ನೀಡಿದರು. ನಾಳೆ ಈ ಅರ್ಜಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News