ಉಡುಪಿ ನಗರಸಭೆ ಉಪ ಚುನಾವಣೆ: ಮದ್ಯ ಮಾರಾಟ ನಿಷೇಧ
Update: 2023-12-20 20:58 IST
ಉಡುಪಿ: ಉಡುಪಿ ನಗರಸಭೆಯ 13ನೇ ಮೂಡು ಪೆರಂಪಳ್ಳಿ ವಾರ್ಡ್‌ನ ಉಪಚುನಾವಣೆಯು ಡಿಸೆಂಬರ್ 27ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಡಿ.26ರ ಬೆಳಗ್ಗೆ 6 ಗಂಟೆಯಿಂದ ಡಿ.27ರಮ ಮಧ್ಯರಾತ್ರಿ 12:00 ಗಂಟೆಯವರೆಗೆ ಪೆರಂಪಳ್ಳಿ ವಾರ್ಡ್‌ನ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್ ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.