×
Ad

ಸರಕಾರದ ಯೋಜನೆ ಜನರಿಗೆ ತಲುಪಲು ಗ್ರಾಮ ಒನ್ ಪಾತ್ರ ಮಹತ್ವ: ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

Update: 2023-12-21 20:14 IST

ಉಡುಪಿ: ಸರಕಾರದಿಂದ ಅನುಷ್ಠಾನಗೊಳಿಸಲಾಗುವ ಹೊಸ ಯೋಜನೆಗಳನ್ನು ನಾಗರಿಕರಿಗೆ ಉತ್ತಮ ರೀತಿಯಲ್ಲಿ ತಲುಪಿ ಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಸೇವಾಸಿಂಧು/ಗ್ರಾಮ ಒನ್ ಜಿಲ್ಲಾಧಿಕಾರಿ ಗಳ ಕಚೇರಿ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರದ ನಿರ್ವಾಹಕರಿಗೆ ನಡೆದ ಜಿಲ್ಲಾಮಟ್ಟದ ಕ್ರೀಡೋತ್ಸವ ಗ್ರಾಮ ಒನ್ ಕ್ರೀಡಾ ಹಬ್ಬ - 2023ನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಈಗಾಗಲೇ ಗ್ರಾಮ ಒನ್ ಕೇಂದ್ರಗಳ ಮೂಲಕ ನಾಗರಿಕರಿಗೆ ಯಶಸ್ವಿಯಾಗಿ ಸೇವೆ ಒದಗಿಸಲಾಗುತ್ತಿದೆ. ದಿನಂಪ್ರತಿ ಜಿಲ್ಲೆಯ ನಾಗರಿಕರಿಗೆ ಸರಕಾರಿ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗಳು ಸಕ್ರಿಯವಾಗಿ ಕ್ರೀಡೆಯಲ್ಲಿ ಭಾಗವಹಿಸಿ, ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಆರ್, ಬ್ರಹ್ಮಾವರ ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಸೇವಾಸಿಂಧು/ಗ್ರಾಮ ಒನ್ ಇದರ ಜಿಲ್ಲಾ ಯೋಜನಾ ವ್ಯವಸ್ಥಾಪಕ ನವೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಗ್ರಾಮ ಒನ್ ಜಿಲ್ಲಾ ಸಂಯೋಜಕ ನಾಗೇಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News