ಗ್ರಾಪಂ ಸದಸ್ಯರಿಗೆ ಏಡ್ಸ್ ಕುರಿತು ಮಾಹಿತಿ ಕಾರ್ಯಾಗಾರ
ಗಂಗೊಳ್ಳಿ, ಡಿ.28: ಕಳೆದ ಕೆಲವು ವರ್ಷಗಳಿಂದ ಹೆಚ್ಚು ಎಚ್‌ಐವಿ ಏಡ್ಸ್ ಪ್ರಕರಣಗಳು ದಾಖಲಾಗುತ್ತಿವೆ. ಸುಮರು 15-40 ವರ್ಷ ಪ್ರಾಯದವರು ಏಡ್ಸ್‌ಗೆ ಬಲಿಯಾಗುತಿತಿದ್ದು, ಪ್ರತಿ ತಿಂಗಳು 5-10 ಮಂದಿ ಈ ರೋಗಕ್ಕೆ ತುತ್ತಾಗಿ ಸಾವನ್ನಪ್ಪು ತ್ತಿದ್ದಾರೆ. ಹೀಗಾಗಿ ಯುವ ಜನರಲ್ಲಿ ಎಚ್‌ಐವಿ ಮತುತಿ ಏಡ್ಸ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಕುಂದಾಪುರ ತಾಲೂಕು ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ನಳಿನಾಕ್ಷಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ಗಂಗೊಳ್ಳಿ ಗ್ರಾಪಂಗಳ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿ ಗ್ರಾಪಂ ಸಭಾಂಗಣದಲ್ಲಿ ಗ್ರಾಪಂ ಸದಸ್ಯರಿಗೆ ಬುಧವಾರ ನಡೆದ ಎಚ್‌ಐವಿ/ಏಡ್ಸ್ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡುತ್ತಿದ್ದರು.
ಕಾರ್ಯಾಗಾರವನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಉದ್ಘಾಟಿಸಿದರು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಪಿಡಿಒ ಉಮಾಶಂಕರ, ಲೆಕ್ಕ ಸಹಾಯಕ ಶೇಖರ ಜಿ., ಆಶಾ ಕಾರ್ಯಕರ್ತೆಯರಾದ ಕಲ್ಪನಾ, ಹೇಮಾ, ಗಂಗೊಳ್ಳಿ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸಿಬ್ಬಂದಿ ನಾರಾಯಣ ಶ್ಯಾನುಬಾಗ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.