×
Ad

ಉಡುಪಿ ಕೃಷ್ಣನಿಗೆ ಕೋಟಿ ತುಳಸಿ ಅರ್ಚನೆ

Update: 2023-12-31 19:29 IST

ಉಡುಪಿ, ಡಿ.31: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಮಹಾ ಮಂಡಲ ಉಡುಪಿ ಇದರ ಅಂಗಸಂಸ್ಥೆ ತುಶಿಮಾಮ ಕಡಿಯಾಳಿ ಇದರ ನೇತೃತ್ವದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾ ಸಭಾ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಬ್ರಾಹ್ಮಣ ವಲಯಗಳ ಸಹಕಾರದೊಂದಿಗೆ ಉಡುಪಿ ಶ್ರೀಕೃಷ್ಣನಿಗೆ ವಿಷ್ಣು ಸಹಸ್ರ ನಾಮಾವಳಿ ಸಹಿತ ಕೋಟಿ ತುಳಸಿ ಅರ್ಚನೆ ಇಂದು ರಾಜಾಂಗಣದಲ್ಲಿ ನಡೆಯಿತು.

ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥರು, ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭತೀರ್ಥರು, ಶೀರೂರು ಮಠಾಧೀಶ ಶ್ರೀವೇದವರ್ಧನ ತೀರ್ಥರು ಕೋಟಿ ತುಳಸಿ ಅರ್ಚನೆ ನೆರವೇರಿಸಿದರು.

ತುಶಿಮಾಮ ಕಡಿಯಾಳಿ ಇದರ ಅಧ್ಯಕ್ಷರಾದ ರಘುಪತಿ ಉಪಾಧ್ಯ, ಕಾರ್ಯದರ್ಶಿ ರಾಜೇಶ್ ಭಟ್ ಪಣಿಯಾಡಿ, ಕೋಶಾಧಿಕಾರಿ ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯ ಮತ್ತು ಇತರ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಸಮಸ್ತ ವಿಪ್ರಬಂಧವರ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News