ಗಾಂಜಾ ಸೇವನೆ ಆರೋಪ: ಮೂವರು ವಶಕ್ಕೆ
Update: 2024-01-02 20:54 IST
ಉಡುಪಿ, ಜ.2: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಡಿ.31ರಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಂಜೆ ಕ್ರಾಸ್ ಬಳಿ ಮುಹಮ್ಮದ್ ತೌಫಿಕ್(26) ಹಾಗೂ ಪೊಲಿಪು ಜಂಕ್ಷನ್ ಬಳಿ ಅಕೀಬ್ ಜಾವೇದ್(29) ಮತ್ತು ಡಿ.26ರಂದು ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪೂರು ಗ್ರಾಮದ ಕೊಳಲಗಿರಿಯ ಗಿರಿ ಬಾರ್ ಸಮೀಪ ಕಿಶೋರ್(21) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಆಸ್ಪತ್ರೆಯ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ತಜ್ಞರ ಮುಂದೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ವರದಿಯಲ್ಲಿ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವು ದಾಗಿ ಪೊಲೀಸರು ತಿಳಿಸಿದ್ದಾರೆ.