×
Ad

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

Update: 2024-01-05 20:31 IST

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡಿಮಿಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ 21ರಿಂದ 35ವರ್ಷದೊಳಗಿನ ಯುವಕ- ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪದವಿಯಲ್ಲಿ ತೇರ್ಗಡೆ ಹೊಂದಿದ ಆಸಕ್ತ ಯುವಕ ಹಾಗೂ ಯುವತಿ ಯರು ಜನವರಿ 15ರ ಸಂಜೆ 5 ಗಂಟೆಯ ಒಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಕಚೇರಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ ದೂ.ಸಂಖ್ಯೆ:0820-2521324, ಮೊ.ನಂ: 9845432303ಅನ್ನು ಸಂಪರ್ಕಿ ಸಬಹುದು ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News