×
Ad

ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗೆ ಉಡುಪಿ ಡಿಸಿ ಸೂಚನೆ

Update: 2024-01-09 19:23 IST

ಉಡುಪಿ: ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಮುಂದಿನ ಜ.26ರಂದು ಅರ್ಥಪೂರ್ಣವಾಗಿ ವಿಜೃಂಭಣೆ ಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಂಗಳವಾರ ಮಣಿಪಾಲ ರಜತಾದ್ರಿಯಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪ್ರತೀ ವರ್ಷದಂತೆ ಈ ಬಾರಿಯೂ ಜನವರಿ 26 ರಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ ಎಂದರು.

ಸಮಾರಂಭದಲ್ಲಿ ಪೊಲೀಸ್, ಅರಣ್ಯ, ಗೃಹ ರಕ್ಷಕ, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಲಿದ್ದು, ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಿದ್ಧಪಡಿಸಿ, ಜನಪ್ರತಿನಿಧಿಗಳಿಗೆ, ಗಣ್ಯರಿಗೆ, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಕುಟುಂಬದವ ರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ನಗರದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿಗಳು ತಪ್ಪದೇ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸು ವಂತೆ ಮನವಿ ಮಾಡಿದರು.

ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ತರಬೇತಿ ನಿರತ ಐಪಿಎಸ್ ಅಧಿಕಾರಿ ಹರ್ಷ ಪ್ರಿಯಂವದ, ಎಎಸ್‌ಪಿ ಸಿದ್ಧಲಿಂಗಪ್ಪ, ಪೌರಾಯುಕ್ತ ರಾಯಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News