ವಾಹನ ಢಿಕ್ಕಿ: ಮಹಿಳೆ ಮೃತ್ಯು
Update: 2024-01-09 21:21 IST
ಕುಂದಾಪುರ, ಜ.9: ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೀಜಾಡಿ ನಾರಾಯಣ ಭಂಡಾರಿ ಕಟ್ಟಿಂಗ್ ಶಾಪ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.8ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಕಮಲ ಎಂದು ಗುರುತಿಸಲಾಗಿದೆ. ಇವರು ಸರ್ವಿಸ್ ರಸ್ತೆಯಲ್ಲಿ ದಾಟುತ್ತಿರುವಾಗ ಗೂಡ್ಸ್ ವಾಹನದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.