×
Ad

ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Update: 2024-01-11 21:21 IST

ಉಡುಪಿ, ಜ.11: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್ - ಪುರುಷ ಮತ್ತು ತೃತೀಯ ಲಿಂಗ ಪುರುಷ) 3,064 ಹುದ್ದೆಗಳಿಗೆ ಜನವರಿ 28ರಂದು ಬೆಳಗ್ಗೆ 11ರಿಂದ ಅಪರಾಹ್ನ 12:30ರವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಲಿದೆ.

ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಮೂಲಕ ಮುಂಬರುವ ದಿನಗಳಲ್ಲಿ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News